16 ಲಕ್ಷ ಮೌಲ್ಯದ ಬಂಗಾರ ಮಾರಾಟ ಮಾಡಲು ಯತ್ನಿಸಿದ ಮಹಿಳೆ ಬಂಧನ…

ಹಾವೇರಿ ಜಿಲ್ಲಾಸತ್ರ ಕೋರ್ಟ್‌ಗೆ ಬಾಂಬ್ ಬೆದರಿಕೆ ಪತ್ರ; ಕೋರ್ಟನಿಂದ ಓಡಿ ಬಂದ ಕಕ್ಷಿದಾರರು, ವಕೀಲರು.

ಸಿಎಂ ಕುರ್ಚಿ ಗುದ್ದಾಟದ ವಿಚಾರ…! ಮತ್ತೆ ಗರಂ ಆದ ಸಿಎಂ ಸಿದ್ಧರಾಮಯ್ಯ.

ಸಾಯಿ ಆಸ್ಪತ್ರೆ ವೈದ್ಯನ ಮೇಲೆ ಹಲ್ಲೆ: 8 ಜನರ ವಿರುದ್ಧ ಪ್ರಕರಣ ದಾಖಲು.

ಹಾವೇರಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾಗಿ ನಿಂಗರಾಜ ಕೋಡಿಹಳ್ಳಿ, ಪ್ರಧಾನ ಕಾರ್ಯದರ್ಶಿಯಾಗಿ ಸಿದ್ದು ಚಿಕ್ಕಬಿದರಿ ನೇಮಕ.

ನ್ಯಾಯಬೆಲೆ ಅಂಗಡಿ ಪ್ರಾಧಿಕಾರವನ್ನು ವರ್ಗಾವಣೆ ಮಾಡಿಕೊಡಲು ಲಂಚ ಸ್ವೀಕಾರ, ರಾಣೆಬೆನ್ನೂರ ತಹಶೀಲ್ದಾರ ಕಛೇರಿಯ ಆಹಾರ ನಿರೀಕ್ಷಕ ಬಂಧನ.

ಉಚಿತ ಚಿಕನ್ ಬಿರಿಯಾನಿ ಬೇಕಾ,‌ ಆಗಾದ್ರೆ ಬಸ್ ನಿಲ್ದಾಣಕ್ಕೆ ಬನ್ನಿ.

ಅಂಬೇಡ್ಕರ್, ಗಾಂಧಿ ಹೆಸರು ಅಳಿಸಲು ಹೊರಟಿರುವ ವಿರುದ್ಧ ನನ್ನ ಹೋರಾಟ; ಸಚಿವ ಸತೀಶ ಜಾರಕಿಹೊಳಿ

ನಗರಸಭೆ ಆಡಳಿತಾಧಿಕಾರಿಯಾಗಿ ಅಧಿಕಾರ ಸ್ವೀಕಾರ ಮಾಡಿದ ಜಿಲ್ಲಾಧಿಕಾರಿ.

ತವರ ಮನೆಗೆ ಹೆಂಡತಿ ಹೋದಾಗ ಎರಡನೇ ಮದುವೆಯಾದ ಭೂಪ ಜೈಲು ಪಾಲು…!

ದಾರಿ ತಪ್ಪಿ ಬಂದಿದಲ್ಲ, ದಾರಿ ಹುಡಕಿಕೊಂಡು ಬಂದೇನಿ; ಗಜರಾಜನ ಕೂಗಾಟ

ತಾಯಿ ಮೇಲೆ ಹಲ್ಲೆ ಮಾಡಿದ್ರೆ ಹುಷಾರ…! ಪುತ್ರ, ಸೊಸೆಗೆ ಜೈಲು ಪಾಲು

ನಿರ್ಮಾಣ ಹಂತದ ಟ್ಯಾಂಕನಿದ್ದು ಬಿದ್ದು ಕಾರ್ಮಿಕ ಸಾವು.

ಒಂಟಿ ಮನೆಯಲ್ಲಿದ್ದ ಮಹಿಳೆಯ ಕತ್ತು ಕೊಯ್ದು ಕೊಲೆ‌ಮಾಡಿದ ವ್ಯಕ್ತಿ ಬಂಧನ

ರಾಣೆಬೇನ್ನೂರ ನಗರದಲ್ಲಿ ಮಹಿಳೆಯ ಭೀಕರ ಕೊಲೆ, ಕಾರಣ ನಿಗೂಢ…!

ಹೊಲದಲ್ಲಿ ವಿದ್ಯುತ್ ಸ್ಪರ್ಶಿಸಿ ಯುವ ರೈತ ಸಾವು

ಸಿಎಂ ಬದಲಾವಣೆ ವಿಚಾರ ಹೈಕಮಾಂಡಗೆ ಬಿಟ್ಟ ವಿಚಾರ; ಕೆ.ಬಿ.ಕೋಳಿವಾಡ.

ಕಾಂಗ್ರೆಸ್ ಪಕ್ಷ ಹಿಂದುಳಿದ, ದಲಿತರಿಗೆ ಹಾಗೂ ಮುಸ್ಲಿಂ ಸಮುದಾಯಕ್ಕೆ ಎಲ್ಲಾ ಸ್ಥಾನಮಾನ ನೀಡಿದೆ ಸದಸ್ಯ ಪುಟ್ಟಪ್ಪ ಮರಿಯಮ್ಮನವರ.

ಡಿಕೆಶಿ ಭೇಟಿ ಮಾಡಿದ ಹಾವೇರಿ ಜಿಲ್ಲೆಯ ಮೂವರು ಶಾಸಕರು.

ಸ್ಪೆಷಲ್ ತರಗತಿ ನೆಪದಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ,ಮಾಸ್ತರ ಎಸ್ಕೇಪ್..!

ತಾಪಂ ಕೆಡಿಪಿ ಸಭೆಯಲ್ಲಿ ಆರೋಗ್ಯ ಇಲಾಖೆಯ ಅಧಿಕಾರಿಗೆ ತರಾಟೆ..!

ರಾಣೆಬೇನ್ನೂರು: ಹೆರಿಗೆ ಆಸ್ಪತ್ರೆಯಲ್ಲಿ 15 ದಿನಗಳ ಕಾಲ ಶಸ್ತ್ರಚಿಕಿತ್ಸೆ ಕೊಠಡಿ ಬಂದ್ ಆಗಿದ್ದರಿಂದ ಮಹಿಳೆಯರು ಖಾಸಗಿ ಆಸ್ಪತ್ರೆಗೆ ತೆರಳಿದ್ದಾರೆ. ಇದಕ್ಕೆ ಕಾರಣ ಏನು ಎಂದು ತಾಲೂಕು ಆರೋಗ್ಯಾಧಿಕಾರಿ ಡಾ. ರಾಜೇಶ್ವರಿ ಅವರನ್ನ ತಾಪಂ ಆಡಳಿತಾಧಿಕಾರಿ ಹಾಗೂ ಜಿಪಂ ಉಪ ಕಾರ್ಯದರ್ಶಿ ಡಾ. ರಂಗಸ್ವಾಮಿ ತರಾಟೆಗೆ ತೆಗೆದುಕೊಂಡರು.

ನಗರದ ತಾಪಂ ಸಭಾಭವನದಲ್ಲಿ ಶುಕ್ರವಾರ ಏರ್ಪಡಿಸಿದ್ದ ತಾಪಂ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು,  ತಾಲೂಕಿನಲ್ಲಿ ಶೇ.45% ಹೆರಿಗೆಗಳು ಖಾಸಗಿ ಆಸ್ಪತ್ರೆಯಲ್ಲಿ ನಡೆದಿವೆ. ಸರ್ಕಾರದ ಆಸ್ಪತ್ರೆಯಲ್ಲಿ ಏಕೆ ಹೆರಿಗೆಗಳು ಆಗುತ್ತಿಲ್ಲ ಎಂದು ಪ್ರಶ್ನಿಸಿದಾಗ, ಇದಕ್ಕೆ ಪ್ರತಿಕ್ರಿಯಿಸಿದ ಡಾ. ರಾಜೇಶ್ವರಿ, ಶಸ್ತ್ರಚಿಕಿತ್ಸಾ ಕೊಠಡಿ ದುರಸ್ತಿ ಬಂದಿದ್ದರಿಂದ ಬಂದ್ ಮಾಡಲಾಗಿತ್ತು. ಕೂಡಲೇ ಸರಿಪಡಿಸಿ ಶಸ್ತ್ರಚಿಕಿತ್ಸೆ ಆರಂಭಿಸಲಾಗುವುದು ಎಂದು ತಿಳಿಸಿದರು

ಇನ್ನೂ ತಾಲೂಕಿನಲ್ಲಿ ಒಂದು ಇಲಾಖೆಯ ಅಧಿಕಾರಿಗಳು ಹಾಗೂ ಮತ್ತೊಂದು ಇಲಾಖೆಯ ಅಧಿಕಾರಿಗಳ ನಡುವೆ ಸಮನ್ವಯ ಕೊರತೆ ಕಂಡು ಬಂದಿದೆ. ಇದರಿಂದ ಕಾಮಗಾರಿ ಹಾಗೂ ಆಡಳಿತ ಯಂತ್ರ ಸರಿಯಾಗಿ ಹೋಗುತ್ತಿಲ್ಲ. ಕೂಡಲೇ ಅಧಿಕಾರಿಗಳು ಇತರ ಇಲಾಖೆಯೊಂದಿಗೆ ಸಮನ್ವತೆ ಕಾಪಾಡಿಕೊಂಡು ಅಭಿವೃದ್ಧಿ ಕಾಮಗಾರಿಗಳಿಗೆ ವೇಗ ನೀಡಬೇಕು ಎಂದರು.

ತಾಲೂಕಿನಲ್ಲಿ ನಡೆದಿರುವ ಅಂಗನವಾಡಿ ಕಟ್ಟಡಗಳ ನಿರ್ಮಾಣ ಕಾಮಗಾರಿ ತ್ವರಿತಗತಿಯಲ್ಲಿ ಮುಗಿಸಬೇಕು. ಮಕ್ಕಳಿಗೆ ಅನುಕೂಲ ಮಾಡಿಕೊಡಬೇಕು. ಇದು ಪಂಚಾಯತ್ ರಾಜ್ಯ ಇಲಾಖೆಯ ಸೂಚನೆಯಿದೆ ಎಂದು ಸಿಡಿಪಿಒ ಪಾರ್ವತಿ ಹುಂಡೇಕಾರ ಅವರಿಗೆ ಸೂಚಿಸಿದರು.

ತಾಲೂಕಿನ ರಸ್ತೆ ಹಾಗೂ ಕಟ್ಟಡಗಳ ಕಾಮಗಾರಿಗಳು ಇನ್ನೂ ಪ್ರಗತಿಯಲ್ಲಿರುವುದು ನೋಡಿದರೆ ಈ ಭಾಗದಲ್ಲಿ ಅಭಿವೃದ್ಧಿಗೆ ಹಿನ್ನಡೆಯಾಗಿದೆ. ಜಲಜೀವನ ಮಿಷನ್ ಯೋಜನೆಯಡಿ ತ್ವರಿತವಾಗಿ ಕೆಲಸ ಮುಗಿಸಿ ಜನರಿಗೆ ನೀರು ಕೊಡಲು ಮುಂದಾಗಬೇಕು ಎಂದು ಗ್ರಾಮೀಣ ನೀರು ಮತ್ತು ನೈರ್ಮಲ್ಯ ವಿಭಾಗದ ಇಂಜಿನಿಯರ್ಗೆ ಸೂಚಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಎಇಇ ರಾಮಕೃಷ್ಣ, ಗುತ್ತಿಗೆದಾರರನ್ನು ಕರೆದುಕೊಂಡು ಶಾಸಕರಿಗೆ ಭೇಟಿ ಮಾಡಿಸಿದ್ದೇನೆ. ಆದರೂ ಕೆಲವರು ಕೆಲಸ ಮಾಡುತ್ತಿಲ್ಲ ಎಂದು ಆರೋಪಿಸಿದರು. ಇದಕ್ಕೆ ಕೋಪಕೊಂಡ ಆಡಳಿತಾಧಿಕಾರಿ ರಂಗಸ್ವಾಮಿ, ಯಾರೂ ಕೆಲಸ ಮಾಡುವುದಿಲ್ಲ ಅಂತಹ ಗುತ್ತಿಗೆದಾರರಿಗೆ ನೋಟಿಸ್ ನೀಡಿ ಅವರ ಕಾಮಗಾರಿ ಪರವಾನಗಿ ರದ್ದುಗೊಳಿಸಬೇಕು ಸೂಚಿಸಿದರು.

ಶಾಸಕ ಪ್ರಕಾಶ ಕೋಳಿವಾಡ, ತಾಪಂ ಇಒ ಪರಮೇಶ, ತಹಸೀಲ್ದಾರ್ ಆರ್.ಎಚ್. ಭಾಗವಾನ್ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಸಭೆಯಲ್ಲಿದ್ದರು.

ಸುದ್ದಿ ಮತ್ತು ಜಾಹಿರಾತುಗಾಗಿ ಸಂಪರ್ಕಿಸಿ : 80952 03132
error: Content is protected !!