ರಾಣೆಬೇನ್ನೂರು: ನಗರದಲ್ಲಿ ನಕಲಿ ಮೆಕ್ಕೆಜೋಳ ಬಿತ್ತನೆ ಬೀಜಗಳನ್ನು ಮಾರಾಟ ಮಾಡುವುದರಿಂದ ರಾಣೆಬೇನ್ನೂರು ತಾಲೂಕು ನಕಲಿ ಬೀಜ ಮಾರಾಟ ನಗರ ಆಗಬಾರದು ಎಂದು ಉಸ್ತುವಾರಿ ಸಚಿವ ಶಿವಾನಂದ ಪಾಟೀಲ್ ಅವರು ಕೃಷಿ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.
ತಾಲೂಕಿನ ಹೂಲಿಹಳ್ಳಿ ಬಳಿವಿರುವ ಮೆಗಾ ಮಾರುಕಟ್ಟೆಯಲ್ಲಿ ಸುಮಾರು 30ಕೋಟಿ ರೂ ವೆಚ್ಚದ ಕೋಲ್ಡ್ ಸ್ಟೋರೇಜ್ (ಶಿಥಿಲ ಗೃಹಗಳ) ಕಾಮಾಗಾರಿಗೆ ಚಾಲನೆ ನೀಡಿ ಮಾತನಾಡಿದರು.
ರಾಣೆಬೇನ್ನೂರು ತಾಲೂಕಿನಲ್ಲಿ ಅತಿ ಹೆಚ್ಚು ರೈತರು ಇರುವ ಹಿನ್ನೆಲೆ ಈಗಾಗಲೇ ಸುಮಾರು 220 ಕೋಟಿ ವೆಚ್ಚದಲ್ಲಿ ಮೆಗಾ ಮಾರುಕಟ್ಟೆ ನಿರ್ಮಾಣ ಮಾಡಲಾಗಿದೆ. ಆದರೆ ಅದು ಸದ್ಬಳಕೆ ಆಗುತ್ತಿಲ್ಲ ಎಂಬ ಬೇಸರವಿದೆ. ಮುಂದಿನ ದಿನಗಳಲ್ಲಿ ಇದು ಉತ್ತಮ ಮಾರುಕಟ್ಟೆಯಾಗಿ ರಾಜ್ಯದಲ್ಲಿ ಹೆಸರು ಪಡೆಯುತ್ತದೆ ಎಂಬ ವಿಶ್ವಾಸವಿದೆ.
ಈಗ ರಾಜ್ಯ ಸರ್ಕಾರ ಹಾಗೂ ಕೃಷಿ ಮಾರುಕಟ್ಟೆ ವತಿಯಿಂದ ಸುಮಾರು ಮೂವತ್ತು ಕೋಟಿ ರೂ ವೆಚ್ಚದಲ್ಲಿ ಅತ್ಯಾಧುನಿಕ ಶಿಥಿಲ ಗೃಹಗಳನ್ನು ನಿರ್ಮಾಣ ಮಾಡಲು ಮುಂದಾಗಿದ್ದೇವೆ. ಇದರಿಂದ ಇಲ್ಲಿನ ರೈತರು ಬೆಳೆದಂತಹ ಹಸಿ ಬೆಳೆಗಳನ್ನು ಸಂಗ್ರಹಣೆ ಮಾಡಲು ಸಹಾಯಕವಾಗಲಿದೆ ಎಂದರು.
ಹಾವೇರಿ ಜಿಲ್ಲೆ ಸೇರಿದಂತೆ ತಾಲೂಕಿನಲ್ಲಿ ನಕಲಿ ಮೆಕ್ಕೆಜೋಳ ಬಿತ್ತನೆ ಬೀಜ ಮಾರಾಟ ಮಾಡುತ್ತಿದ್ದು ರೈತರಿಗೆ ಅನ್ಯಾಯವಾಗುತ್ತದೆ ಎಂಬ ಮಾಹಿತಿ ಇದೆ. ಲೈಸೆನ್ಸ್ ಇರುವ ಅಂಗಡಿ ಮಾಲೀಕರೆ ಮಾರಾಟ ಮಾಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದು, ಈಗಾಗಲೇ ಕೃಷಿ ಇಲಾಖೆಯ ಅಧಿಕಾರಿಗಳು ಮಾರಾಟ ಮಾಡಿದ ನಾಲ್ಕು ಅಂಗಡಿಗಳನ್ನು ಲೈಸನ್ಸ್ ಅಮಾನತು ಮಾಡಿದ್ದೇವಿ ಎಂದರು.
ಕಾರ್ಯಕ್ರಮದಲ್ಲಿ ಶಾಸಕ ಬಸವರಾಜ ಶಿವಣ್ಣನವರ, ಹಾವೇಮಲು ಅಧ್ಯಕ್ಷ ಮಂಜನಗೌಡ ಪಾಟೀಲ, ಹೆಸ್ಕಾಂ ಅಧ್ಯಕ್ಷ ಅಜ್ಜಂಪೀರ್ ಖಾದ್ರಿ, ಸಂಜೀವಕುಮಾರ ನೀರಲಗಿ, ಬಸವರಾಜ ಸವಣೂರು, ಜಿಪಂ ಸಿಇಓ ರುಚಿ ಬಿಂದಾಲ್, ಎಸ್ಪಿ ಅಂಶುಕುಮಾರ ಸೇರಿದಂತೆ ಇತರರು ಹಾಜರಿದ್ದರು.
More Stories
ನಗರದ ಬಳ್ಳಾರಿ ಕಲ್ಯಾಣ ಮಂಟಪದಲ್ಲಿ ಐದು ದಿನಗಳ ಕಾಲ ಹಲಸು-ಮಾವು ಮೇಳ.
ಹಾವೇರಿ ನೂತನ ಎಸ್ಪಿಯಾಗಿ ಮಹಿಳಾ ಅಧಿಕಾರಿ, ಯಾರು ಅವರು!
ರಾಣೆಬೆನ್ನೂರ ನಗರದಲ್ಲಿ ನಕಲಿ ರಸಗೊಬ್ಬರ ಪತ್ತೆ, ವಶಪಡಿಸಿಕೊಂಡ ಕೃಷಿ ಅಧಿಕಾರಿಗಳು.