ರಾಣೆಬೇನ್ನೂರು: ಲೋಕಾಯುಕ್ತ ಅಧಿಕಾರಿಗಳಿಂದ ನಾಳೆ ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ನಗರದ ತಹಸೀಲ್ದಾರ ಕಚೇರಿಯಲ್ಲಿ ಸಾರ್ವಜನಿಕ ಕುಂದು ಕೊರತೆಗಳನ್ನು ಹಾಗೂ ಸಾರ್ವಜನಿಕ ಅಹವಾಲು ಸ್ವೀಕಾರ ನಡೆಯಲಿದೆ.
ಸರ್ಕಾರಿ ಕಚೇರಿಗಳ ದುರಾಡಳಿತ, ಸಾರ್ವಜನಿಕ ಕೆಲಸಗಳ ವಿಳಂಬ, ಕಳಪೆ ಕಾಮಗಾರಿ, ಸರ್ಕಾರಿ ನೌಕರರ ಅಕ್ರಮ ಆಸ್ತಿ ಗಳಿಕೆ, ಲಂಚ ಬೇಡಿಕೆ ದೂರುಗಳನ್ನು ನೀಡಬಹುದು.
ಕರ್ನಾಟಕ ಲೋಕಾಯುಕ್ತ ಡಿಎಸ್ಪಿ ಮಧುಸೂದನ್, ಪೋಲಿಸ್ ನಿರೀಕ್ಷಕ ದಾದಾವಲಿ ಕೆ.ಎಚ್, ಮಂಜುನಾಥ ಪಂಡಿತ ಹಾಗೂ ಬಸವರಾಜ ಹಳಬಣ್ಣನವರ ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಲೋಕಾಯುಕ್ತ ಕಚೇರಿ ಪ್ರಕಟಣೆ ತಿಳಿಸಿದೆ.

More Stories
16 ಲಕ್ಷ ಮೌಲ್ಯದ ಬಂಗಾರ ಮಾರಾಟ ಮಾಡಲು ಯತ್ನಿಸಿದ ಮಹಿಳೆ ಬಂಧನ…
ಹಾವೇರಿ ಜಿಲ್ಲಾಸತ್ರ ಕೋರ್ಟ್‌ಗೆ ಬಾಂಬ್ ಬೆದರಿಕೆ ಪತ್ರ; ಕೋರ್ಟನಿಂದ ಓಡಿ ಬಂದ ಕಕ್ಷಿದಾರರು, ವಕೀಲರು.
ಸಾಯಿ ಆಸ್ಪತ್ರೆ ವೈದ್ಯನ ಮೇಲೆ ಹಲ್ಲೆ: 8 ಜನರ ವಿರುದ್ಧ ಪ್ರಕರಣ ದಾಖಲು.