16 ಲಕ್ಷ ಮೌಲ್ಯದ ಬಂಗಾರ ಮಾರಾಟ ಮಾಡಲು ಯತ್ನಿಸಿದ ಮಹಿಳೆ ಬಂಧನ…

ಹಾವೇರಿ ಜಿಲ್ಲಾಸತ್ರ ಕೋರ್ಟ್‌ಗೆ ಬಾಂಬ್ ಬೆದರಿಕೆ ಪತ್ರ; ಕೋರ್ಟನಿಂದ ಓಡಿ ಬಂದ ಕಕ್ಷಿದಾರರು, ವಕೀಲರು.

ಸಿಎಂ ಕುರ್ಚಿ ಗುದ್ದಾಟದ ವಿಚಾರ…! ಮತ್ತೆ ಗರಂ ಆದ ಸಿಎಂ ಸಿದ್ಧರಾಮಯ್ಯ.

ಸಾಯಿ ಆಸ್ಪತ್ರೆ ವೈದ್ಯನ ಮೇಲೆ ಹಲ್ಲೆ: 8 ಜನರ ವಿರುದ್ಧ ಪ್ರಕರಣ ದಾಖಲು.

ಹಾವೇರಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾಗಿ ನಿಂಗರಾಜ ಕೋಡಿಹಳ್ಳಿ, ಪ್ರಧಾನ ಕಾರ್ಯದರ್ಶಿಯಾಗಿ ಸಿದ್ದು ಚಿಕ್ಕಬಿದರಿ ನೇಮಕ.

ನ್ಯಾಯಬೆಲೆ ಅಂಗಡಿ ಪ್ರಾಧಿಕಾರವನ್ನು ವರ್ಗಾವಣೆ ಮಾಡಿಕೊಡಲು ಲಂಚ ಸ್ವೀಕಾರ, ರಾಣೆಬೆನ್ನೂರ ತಹಶೀಲ್ದಾರ ಕಛೇರಿಯ ಆಹಾರ ನಿರೀಕ್ಷಕ ಬಂಧನ.

ಉಚಿತ ಚಿಕನ್ ಬಿರಿಯಾನಿ ಬೇಕಾ,‌ ಆಗಾದ್ರೆ ಬಸ್ ನಿಲ್ದಾಣಕ್ಕೆ ಬನ್ನಿ.

ಅಂಬೇಡ್ಕರ್, ಗಾಂಧಿ ಹೆಸರು ಅಳಿಸಲು ಹೊರಟಿರುವ ವಿರುದ್ಧ ನನ್ನ ಹೋರಾಟ; ಸಚಿವ ಸತೀಶ ಜಾರಕಿಹೊಳಿ

ನಗರಸಭೆ ಆಡಳಿತಾಧಿಕಾರಿಯಾಗಿ ಅಧಿಕಾರ ಸ್ವೀಕಾರ ಮಾಡಿದ ಜಿಲ್ಲಾಧಿಕಾರಿ.

ತವರ ಮನೆಗೆ ಹೆಂಡತಿ ಹೋದಾಗ ಎರಡನೇ ಮದುವೆಯಾದ ಭೂಪ ಜೈಲು ಪಾಲು…!

ದಾರಿ ತಪ್ಪಿ ಬಂದಿದಲ್ಲ, ದಾರಿ ಹುಡಕಿಕೊಂಡು ಬಂದೇನಿ; ಗಜರಾಜನ ಕೂಗಾಟ

ತಾಯಿ ಮೇಲೆ ಹಲ್ಲೆ ಮಾಡಿದ್ರೆ ಹುಷಾರ…! ಪುತ್ರ, ಸೊಸೆಗೆ ಜೈಲು ಪಾಲು

ನಿರ್ಮಾಣ ಹಂತದ ಟ್ಯಾಂಕನಿದ್ದು ಬಿದ್ದು ಕಾರ್ಮಿಕ ಸಾವು.

ಒಂಟಿ ಮನೆಯಲ್ಲಿದ್ದ ಮಹಿಳೆಯ ಕತ್ತು ಕೊಯ್ದು ಕೊಲೆ‌ಮಾಡಿದ ವ್ಯಕ್ತಿ ಬಂಧನ

ರಾಣೆಬೇನ್ನೂರ ನಗರದಲ್ಲಿ ಮಹಿಳೆಯ ಭೀಕರ ಕೊಲೆ, ಕಾರಣ ನಿಗೂಢ…!

ಹೊಲದಲ್ಲಿ ವಿದ್ಯುತ್ ಸ್ಪರ್ಶಿಸಿ ಯುವ ರೈತ ಸಾವು

ಸಿಎಂ ಬದಲಾವಣೆ ವಿಚಾರ ಹೈಕಮಾಂಡಗೆ ಬಿಟ್ಟ ವಿಚಾರ; ಕೆ.ಬಿ.ಕೋಳಿವಾಡ.

ಕಾಂಗ್ರೆಸ್ ಪಕ್ಷ ಹಿಂದುಳಿದ, ದಲಿತರಿಗೆ ಹಾಗೂ ಮುಸ್ಲಿಂ ಸಮುದಾಯಕ್ಕೆ ಎಲ್ಲಾ ಸ್ಥಾನಮಾನ ನೀಡಿದೆ ಸದಸ್ಯ ಪುಟ್ಟಪ್ಪ ಮರಿಯಮ್ಮನವರ.

ಡಿಕೆಶಿ ಭೇಟಿ ಮಾಡಿದ ಹಾವೇರಿ ಜಿಲ್ಲೆಯ ಮೂವರು ಶಾಸಕರು.

ಸ್ಪೆಷಲ್ ತರಗತಿ ನೆಪದಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ,ಮಾಸ್ತರ ಎಸ್ಕೇಪ್..!

ರಾಣೆಬೇನ್ನೂರಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗಡ್ಡದೇವರಮಠಗೆ ಜನ ಬೆಂಬಲ ಸಿಕ್ತಿಲ್ಲವೇ..?

ರಾಣೆಬೇನ್ನೂರು ಸುದ್ದಿ

ಹಾವೇರಿ-ಗದಗ ಲೋಕಸಭಾ ಕಾಂಗ್ರೆಸ್  ಅಭ್ಯರ್ಥಿಯಾಗಿರುವ ಆನಂದಸ್ವಾಮಿ ಗಡ್ಡದೇವರಮಠರಿಗೆ ರಾಣೆಬೇನ್ನೂರು ವಿಧಾನಸಭಾ ಕ್ಷೇತ್ರದಲ್ಲಿ ಜನ‌ಬೆಂಬಲ‌ ಸಿಗ್ತಿಲ್ಲ ಎಂಬುದು ಅವರ ನಗರದಲ್ಲಿ ನಡೆಸಿದಂತಹ ರೋಡ್ ಶೋ ರ್ಯಾಲಿಯಲ್ಲಿ ಕಂಡು ಬಂದಿದೆ.

ತಾಲೂಕಿನ ಹಲವು ಗ್ರಾಮಗಳಿಗೆ ಒಂದು ಸುತ್ತ ಸಂಚರಿಸಿ ಮತಯಾಚನೆ ಮಾಡಿರುವ  ಕಾಂಗ್ರೆಸ್ ನ ಆನಂದಸ್ವಾಮಿ ಗಡ್ಡದೇವರಮಠ ಅವರಿಗೆ ನಿರೀಕ್ಷಿತ ಮಟ್ಟದಲ್ಲಿ ಜನ ಬೆಂಬಲ ಸಿಗುತ್ತಿಲ್ಲ ಎಂದು ಕಾಂಗ್ರೆಸ್ ಪಕ್ಷದ ಮುಖಂಡರೊಬ್ಬರು ಮಾತಾಗಿದೆ.

 

ಇತ್ತ ಗಡ್ಡದೇವರಮಠ ಅವರು ರಾಜ್ಯ ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳನ್ನು ಮುಂದಿಟ್ಟುಕೊಂಡು  ಮತಬೇಟೆಗೆ ಇಳಿದಿದ್ದಾರೆ. ಆದರೆ ಮೋದಿ ಹವಾ ನಡುವೆ  ಕಾಂಗ್ರೆಸ್ ಅಭ್ಯರ್ಥಿಗೆ‌ ರಾಣೆಬೇನ್ನೂರು ವಿಧಾನಸಭಾ ಕ್ಷೇತ್ರದಲ್ಲಿ ಸರಿಯಾದ ಬೆಂಬಲ ಸೀಗುತ್ತಿಲ್ಲ ಎಂಬುದು ಸಹ ಕಂಡು ಬಂದಿದೆ. ಇದಕ್ಕೆ ಮೂಲ ಕಾರಣ ತಾಲೂಕಿನಲ್ಲಿ  ಕಾಂಗ್ರೆಸ್ ಪಕ್ಷದ ಮುಖಂಡರ ಹಾಗೂ ಕಾರ್ಯಕರ್ತರ ನಡುವೆ ಸಂವಹನ ಕೊರತೆ, ಅಸಂಬದ್ಧ ಸಂಘಟನೆ, ಕಾರ್ಯಕರ್ತರ ಕಡೆಗಣಿಸುವುದರಿಂದ ಕಾಂಗ್ರೆಸ್ ಪಕ್ಷಕ್ಕೆ ಹಿನ್ನಡೆಯಾಗಬಹದು ಎಂದು ತಾಲೂಕಿನ ಮೆಡ್ಲೇರಿ ಗ್ರಾಮದ ನಿಷ್ಠಾವಂತ ಕಾಂಗ್ರೆಸ್ ಮುಖಂಡನ ಮಾತಾಗಿದೆ.

ಶಾಸಕರ ಏಕಾಂಗಿ ಹೋರಾಟ…                      ಕ್ಷೇತ್ರದಲ್ಲಿ ಕಾಂಗ್ರೆಸ್ ಶಾಸಕರಾದ ಪ್ರಕಾಶ ಕೋಳಿವಾಡ ಅವರು ಕಳೆದ ಒಂದು ತಿಂಗಳಿಂದ ಕ್ಷೇತ್ರದಲ್ಲಿ ತಮ್ಮ ಅಭ್ಯರ್ಥಿ ಪರವಾಗಿ ಏಕಾಂಗಿಯಾಗಿ ಹೋರಾಟ ಮಾಡುತ್ತಿದ್ದಾರೆ. ಜತೆಗೆ ಇತ್ತಿಚೆಗೆ ಆರ್.ಶಂಕರ್ ಕಾಂಗ್ರೆಸ್ ಪಕ್ಷಕ್ಕೆ ಸೇರಿದ‌ ಮೇಲೆ ಅವರು ಮತಯಾಚನೆ ಮಾಡುತ್ತಿರುವುದು ಕಂಡು ಬಂದಿದೆ. ಆದರೆ ಗ್ರಾಮಗಳಿಗೆ ತೆರಳಿದ ಸಮಯದಲ್ಲಿ ಪಕ್ಷದಲ್ಲಿ ನಡೆಯುತ್ತಿರುವ ಅನ್ಯಾಯದ ಕುರಿತು ಕಾರ್ಯಕರ್ತರ ಶಾಸಕ ಪ್ರಕಾಶ ಕೋಳಿವಾಡರ ಮುಂದೆ ಹೇಳುತ್ತಿರುವುದು ಕಂಡು ಬಂದಿದೆ.

 

 

 

ಸುದ್ದಿ ಮತ್ತು ಜಾಹಿರಾತುಗಾಗಿ ಸಂಪರ್ಕಿಸಿ : 80952 03132
error: Content is protected !!