ರಾಣೆಬೇನ್ನೂರು: ಬಿಜೆಪಿ ಪ್ರಭಾವಿ ರಾಜಕಾರಣಿ ಹಾಗೂ ಮಾಜಿ ಬಿಜೆಪಿ ಗ್ರಾಮೀಣ ಘಟಕ ಅಧ್ಯಕ್ಷ ಪರಮೇಶಣ್ಣ ಗೂಳಣ್ಣನವರ ಅವರ ಹುಟ್ಟು ಹಬ್ಬದ ಅಂಗವಾಗಿ ಸುಮಾರು ಎರಡು ಸಾವಿರ ಆಟೋ ಚಾಲಕರಿಗೆ ಹಾಗೂ ಮಾಲೀಕರಿಗೆ ಸನ್ಮಾನ ಸಮಾರಂಭ ಆಯೋಜನೆ ಮಾಡಿದ್ದಾರೆ.
ಹೌದು ಜು.22 ರಂದು ಅವರು ಹುಟ್ಟು ಹಬ್ಬದ ಹಿನ್ನೆಲೆ ವಿಶೇಷವಾಗಿ ಅವರು ತಾಲೂಕಿನಾದ್ಯಂತ ಶಾಲಾ ಮಕ್ಕಳಿಗೆ ಪುಸ್ತಕ ಹಾಗೂ ಬ್ಯಾಗ್ ನೀಡಿದ್ದಾರೆ. ಅಲ್ಲದೆ ಹಲವಾರು ಸಾಮಾಜಿಕ ಕಾರ್ಯಕ್ರಮ ಮಾಡಿಕೊಂಡು ಬಂದಿದ್ದಾರೆ. ಈ ಬಾರಿ ಅವರು ಆಟೋ ಚಾಲಕರಿಗೆ ಸನ್ಮಾನ ಸಮಾರಂಭವನ್ನು ಆಯೋಜನೆ ಮಾಡುವ ಮೂಲಕ ತಮ್ಮ ಹುಟ್ಟು ಹಬ್ಬವನ್ನು ವಿಶೇಷವಾಗಿ ಆಚರಿಸಿಕೊಳ್ಳುತ್ತಿದ್ದಾರೆ.
ಈ ಒಂದು ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಉದ್ಘಾಟನೆ ಮಾಡಲಿದ್ದಾರೆ.
ಶಾಸಕ ಪ್ರಕಾಶ ಕೋಳಿವಾಡ, ಮಾಜಿ ಶಾಸಕ ಅರುಣಕುಮಾರ ಪೂಜಾರ, ಮಾಜಿ ಸಚಿವ ಬಿ.ಸಿ.ಪಾಟೀಲ, ಸಂತೋಷಕುಮಾರ ಪಾಟೀಲ, ಚೋಳಪ್ಪ ಕಸವಾಳ ಸೇರಿದಂತೆ ಇತರರು ಭಾಗಿಯಾಗಲಿದ್ದಾರೆ ಎಂದು ಅವರ ಅಭಿಮಾನಿಗಳು ತಿಳಿಸಿದ್ದಾರೆ.
More Stories
ಬಹಳಷ್ಟು ಲಾಭ ಕೊಡುವುದಾಗಿ ನಂಬಿಸಿ 75.42 ಲಕ್ಷ ರೂ. ವಂಚನೆ
ಕಾಕೋಳ ಗ್ರಾಮದಲ್ಲಿ ಸೊಸೈಟಿಗೆ ಕನ್ನ ಹಾಕಿದ ಕಳ್ಳರು.
ಅಧಿಕಾರ ಶಾಶ್ವತವಲ್ಲ, ಜನರ ಸೇವೆ ನಿಜಾವಾದ ಶಾಶ್ವತ ಮಾಜಿ ಶಾಸಕ ಅರುಣಕುಮಾರ ಪೂಜಾರ