ನಗರದ ಮೇಡ್ಲೇರಿ ರಸ್ತೆಯ ಸ್ವಸ್ತಿಕ್ ಅಗ್ರೋ ಸೆಂಟರ್ ಹಾಗೂ ಬನಶಂಕರಿ ಅಗ್ರೋ ಟ್ರೆಡರ್ಸ್ ಪರವಾನಗಿ ಅಮಾನತುಗೊಳಿಸಿರುವುದು.
ಇವರು ಎನ್ಪಿಕೆ 17-17-17 ಎಂಬ ಹೆಸರಿನಲ್ಲಿ ನಕಲಿ ಗೊಬ್ಬರ ಮಾರಾಟ ಮಾಡಿದ್ದರು. ಈ ಕುರಿತು ರೈತರ ದೂರಿನ ಮೇರೆಗೆ ಕೃಷಿ ಅಧಿಕಾರಿಗಳು ಪರಿಶೀಲನೆ ನಡೆಸಿದಾಗ ಕಳಪೆ ಗೊಬ್ಬರ ಎಂಬುದು ದೃಢಪಟ್ಟಿತ್ತು. ಈ ಹಿನ್ನೆಲೆಯಲ್ಲಿ ಮಳಿಗೆಗಳ ಮಾಲೀಕರಾದ ವಿರುಪಾಕ್ಷಪ್ಪ ಎನ್. ಐರಣಿಶೆಟ್ರ ಹಾಗೂ ನಂದೀಶ ಎಂಬುವರ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು. ಇದೀಗ ಅವರ ಪರವಾನಗಿಯನ್ನು ತಾತ್ಕಾಲಿಕವಾಗಿ ಅಮಾತುಗೊಳಿಸಲಾಗಿದೆ ಎಂದು ಸಹಾಯಕ ಕೃಷಿ ನಿರ್ದೇಶಕಿ ಶಾಂತಮಣಿ ಜಿ. ತಿಳಿಸಿದ್ದಾರೆ.
More Stories
16 ಲಕ್ಷ ಮೌಲ್ಯದ ಬಂಗಾರ ಮಾರಾಟ ಮಾಡಲು ಯತ್ನಿಸಿದ ಮಹಿಳೆ ಬಂಧನ…
ಹಾವೇರಿ ಜಿಲ್ಲಾಸತ್ರ ಕೋರ್ಟ್‌ಗೆ ಬಾಂಬ್ ಬೆದರಿಕೆ ಪತ್ರ; ಕೋರ್ಟನಿಂದ ಓಡಿ ಬಂದ ಕಕ್ಷಿದಾರರು, ವಕೀಲರು.
ಸಾಯಿ ಆಸ್ಪತ್ರೆ ವೈದ್ಯನ ಮೇಲೆ ಹಲ್ಲೆ: 8 ಜನರ ವಿರುದ್ಧ ಪ್ರಕರಣ ದಾಖಲು.